ಬೆಂಗಳೂರು: ನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಾಳಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ನಂತರ ಇ ಸಿ ಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ರನ್ಯಾರಾವ್ ಫ್ಲ್ಯಾಟ್ ಮೇಲೆ ಇಡಿ ದಾಳಿ ನಡೆಸಿದೆ.
ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ಮತ್ತು ವಿದೇಶಿ ವಿನಿಮಯ ಕಾನೂನಿನ ಉಲ್ಲಂಘನೆಯ ಅಪರಾಧಗಳ ತನಿಖೆ ನಡೆಸುವ ಕಾರ್ಯವನ್ನು ನಿರ್ವಹಿಸುವ ತನಿಖಾ ಸಂಸ್ಥೆಯಾಗಿದೆ.ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಮಾರು 14 ಕೆಜಿ ಚಿನ್ನದೊಂದಿಗೆ ರನ್ಯ ರಾವ್ ಅವರನ್ನು ಬಂಧಿಸಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯವು ಪ್ರಕರಣದ ತನಿಖೆಗಾಗಿ ಸಿಬಿಐ ಸಹಾಯವನ್ನು ಕೋರಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ಸುದ್ದಿ ಸಂಸ್ಥೆ ವರದಿ ತಿಳಿಸಿದೆ.
ಡಿಆರ್ಐ ಹೆಚ್ಚುವರಿ ನಿರ್ದೇಶಕ ಅಭಿಷೇಕ್ ಚಂದ್ರ ಗುಪ್ತಾ ಅವರ ದೂರಿನ ಮೇರೆಗೆ ರನ್ಯ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿದೆ ಎಂದು ವರದಿ ತಿಳಿಸಿದೆ.