
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದು, ಹಬ್ಬವು ‘ಏಕತೆಯ ಬಣ್ಣಗಳನ್ನು ಗಾಢವಾಗಿಸುತ್ತದೆ’ ಎಂದು ಹೇಳಿದ್ದಾರೆ.
ಈ ವರ್ಷ ಮಾರ್ಚ್ 14 ಶುಕ್ರವಾರದಂದು ಹೋಳಿ ಆಚರಿಸಲಾಗುವುದು. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಣ್ಣಗಳ ಹಬ್ಬವಾದ ಹೋಳಿಗೆ ಶುಭ ಹಾರೈಸಿದ್ದಾರೆ.
“ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಸಂತೋಷದಿಂದ ತುಂಬಿರುವ ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ, ಶಕ್ತಿಯನ್ನು ತುಂಬುತ್ತದೆ ಮತ್ತು ದೇಶವಾಸಿಗಳಲ್ಲಿ ಏಕತೆಯ ಬಣ್ಣಗಳನ್ನು ಗಾಢವಾಗಿಸುತ್ತದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
आप सभी को होली की ढेरों शुभकामनाएं। हर्ष और उल्लास से भरा यह पावन-पर्व हर किसी के जीवन में नई उमंग और ऊर्जा का संचार करने के साथ ही देशवासियों की एकता के रंग को और प्रगाढ़ करे, यही कामना है।
— Narendra Modi (@narendramodi) March 13, 2025