
ನವದೆಹಲಿ: ಮಾರ್ಚ್ 15 ರಂದು ನಿಗದಿಯಾಗಿದ್ದ ಹಿಂದಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಒಂದು ಮಹತ್ವದ ಘೋಷಣೆ ಮಾಡಿದೆ.
ಇತ್ತೀಚಿನ ಪ್ರಕಟಣೆಯ ಪ್ರಕಾರ, ಹೋಳಿ ಹಬ್ಬದ ಕಾರಣ ಮಾರ್ಚ್ 15 ರಂದು ನಿಗದಿಯಾಗಿದ್ದ ಹಿಂದಿ ಬೋರ್ಡ್ ಪರೀಕ್ಷೆ ಬರೆಯಲು ಸಾಧ್ಯವಾಗದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸುವುದಾಗಿ ಮಂಡಳಿ ಘೋಷಿಸಿದೆ.
ಹೋಳಿ ನಿಮಿತ್ತ ಮಾರ್ಚ್ 15ರಂದು ನಡೆಯಲಿರುವ ಹಿಂದಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಸಿಬಿಎಸ್‌ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಪತ್ರಿಕೆ ಬರೆಯಲು ಮತ್ತೊಂದು ಅವಕಾಶ ಸಿಗಲಿದೆ ಎಂದು ಮಂಡಳಿ ಗುರುವಾರ ಪ್ರಕಟಿಸಿದೆ.
ದೇಶದ ಬಹುತೇಕ ಭಾಗಗಳಲ್ಲಿ ಮಾರ್ಚ್ 14 ರಂದು ಹೋಳಿ ಹಬ್ಬವನ್ನು ಆಚರಿಸಲಾಗಿದ್ದರೂ, ಕೆಲವು ಸ್ಥಳಗಳಲ್ಲಿ ಮಾರ್ಚ್ 15 ರಂದು ಆಚರಣೆಗಳು ನಡೆಯುತ್ತವೆ. ಹೋಳಿ ಹಬ್ಬದ ಕಾರಣ ಮಾರ್ಚ್ 15 ರಂದು ನಿಗದಿಯಾಗಿದ್ದ ಹಿಂದಿ ಬೋರ್ಡ್ ಪರೀಕ್ಷೆ ಬರೆಯಲು ಸಾಧ್ಯವಾಗದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸುವುದಾಗಿ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಹೇಳಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದ್ದು, ಫೆಬ್ರವರಿ 15 ರಂದು ಹಾಜರಾಗಲು ಕಷ್ಟವಾಗುವ ವಿದ್ಯಾರ್ಥಿಗಳು ನಂತರದ ದಿನಾಂಕದಂದು ಪತ್ರಿಕೆ ಬರೆಯಲು ಆಯ್ಕೆ ಮಾಡಬಹುದು ಎಂದು ಅವರು ಹೇಳಿದರು.