
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹೆಸರನ್ನು ಮಹಾತ್ಮ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಎಂದು ಬದಲಾವಣೆ ಮಾಡುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಗಿದೆ.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ -2025 ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಡಿಸಿದ್ದಾರೆ. ಧ್ವನಿ ಮತದ ಮೂಲಕ ಮಸೂದೆಗೆ ಸದನ ಒಪ್ಪಿಗೆ ನೀಡಿದೆ.
ಈ ಮೂಲಕ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಗ್ರಾಮೀಣಾಭಿವೃದ್ಧಿ ವಿವಿಗೆ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಅವಕಾಶ ನೀಡಲಾಗಿದೆ.