ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ವಿವಿಧೆಡೆ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆಯಾಗಲಿದೆ..?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು. ಹಾಸನ, ಕೊಡಗು ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ನಿನ್ನೆ ಧರ್ಮಸ್ಥಳ, ಪಣಂಬೂರು, ಮಾಣಿ, ಮಂಗಳೂರು , ಕಳಸದಲ್ಲಿ ಮಳೆಯಾಗಿದ್ದು, ಬಿಸಿಲ ಬೇಗೆಗೆ ಹೈರಾಣಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ.