
ಬೆಂಗಳೂರು: ಜಾತಿ ಮತ್ತು ಸಮುದಾಯದ ಹೆಸರಲ್ಲಿ ಸಭೆ, ಸಮಾವೇಶ ನಡೆಸದಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಸೂಚನೆ ನೀಡಿದ್ದಾರೆ.
ರೇಣುಕಾಚಾರ್ಯ ಅವರನ್ನು ತಮ್ಮ ಮನೆಗೆ ಬುಧವಾರ ರಾತ್ರಿ ಕರೆಸಿಕೊಂಡಿದ್ದ ಯಡಿಯೂರಪ್ಪ, ಯಾವುದೇ ಸಭೆ ಸಮಾವೇಶ ನಡೆಸಿ ಗೊಂದಲ ಸೃಷ್ಟಿಸಬಾರದು. ಏನೇ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕರೆಸಿಕೊಂಡ ಯಡಿಯೂರಪ್ಪ, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚನೆ ನೀಡಿದ್ದಾರೆ.