
ಗದಗ: ಹೋಳಿ ಹಬ್ಬದ ಸಂಭ್ರಮಾಚರಣೆ ಬಳಿಕ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ.
ಕೆರೆಯಲ್ಲಿ ಈಜಲು ಹೋಗಿದ್ದ 16 ವರ್ಷದ ಬಾಲಕ ದೇವೇಂದ್ರ ನೀರುಪಾಲಾಗಿದ್ದಾನೆ. ಈಜು ಬಾರದಿದ್ದರೂ ಬಾಲಕ ಹೋಳಿ ಸಂಭ್ರಮದಲ್ಲಿ ಕೆರೆಗೆ ಇಳಿದಿದ್ದ ಎನ್ನಲಾಗಿದೆ. ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ.
ಬಾಲಕನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.