HomeKarnatakaBREAKING: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂಪುಟ ಒಪ್ಪಿಗೆ: ಈ ಅಧಿವೇಶನದಲ್ಲೇ ವಿಧೇಯಕ ಮಂಡನೆ

BREAKING: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂಪುಟ ಒಪ್ಪಿಗೆ: ಈ ಅಧಿವೇಶನದಲ್ಲೇ ವಿಧೇಯಕ ಮಂಡನೆ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ಕುರಿತಾಗಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಶೇಕಡ 4ರಷ್ಟು ಮೀಸಲಾತಿ ನೀಡಲಾಗುವುದು. ಹಿಂದುಳಿದ, ಇತರೆ ಹಿಂದುಳಿದ ವರ್ಗಗಳಿಗೆ ಮಾತ್ರ ಮೀಸಲಾತಿ ಇತ್ತು. ಮುಸ್ಲಿಂ ಸಮಾಜಕ್ಕೆ ಮೀಸಲಾತಿಯನ್ನು ಸರ್ಕಾರ ವಿಸ್ತರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೆಟ್ ಘೋಷಣೆಯಂತೆ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಹಿಂದುಳಿದ ವರ್ಗಗಳಿಗೆ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೂ ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಕಾಮಗಾರಿಗಳ ಮೊತ್ತವನ್ನು 2 ಕೋಟಿ ರೂಪಾಯಿಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular