alex Certify ವಿದ್ಯಾರ್ಥಿ ನಿಲಯದಲ್ಲಿ ಗಾಂಜಾ ಮಾರಾಟ ; ಹೆಚ್ಚುತ್ತಿರುವ ಮಾದಕ ವ್ಯಸನಕ್ಕೆ ಮತ್ತೊಂದು ಸಾಕ್ಷಿ ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿ ನಿಲಯದಲ್ಲಿ ಗಾಂಜಾ ಮಾರಾಟ ; ಹೆಚ್ಚುತ್ತಿರುವ ಮಾದಕ ವ್ಯಸನಕ್ಕೆ ಮತ್ತೊಂದು ಸಾಕ್ಷಿ !

ಕೇರಳದ ಕೊಚ್ಚಿಯ ಹಾಸ್ಟೆಲ್ ಒಂದರಲ್ಲಿ ನಡೆದ ಪೊಲೀಸ್ ದಾಳಿಯಲ್ಲಿ ಚಿಲ್ಲರೆ ಮಾರಾಟಕ್ಕೆ ಸಂಗ್ರಹಿಸಿದ್ದ ಸುಮಾರು 2 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕಲಾಮಸ್ಸೇರಿ ಸರ್ಕಾರಿ ಪಾಲಿಟೆಕ್ನಿಕ್‌ನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು.

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಾಗ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಕಾಶ್, ಅಭಿರಾಜ್ ಮತ್ತು ಆದಿತ್ಯ ಎಂಬ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ಘಟನೆ ಕೇರಳದಾದ್ಯಂತ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನದ ಆತಂಕವನ್ನು ಹೆಚ್ಚಿಸಿದೆ.

ಈ ಪ್ರಕರಣದಲ್ಲಿ ಆಡಳಿತಾರೂಢ ಸಿಪಿಎಂ ಬೆಂಬಲಿತ ಎಸ್‌ಎಫ್‌ಐ ಸ್ಥಳೀಯ ನಾಯಕ ಅಭಿರಾಜ್ ಭಾಗಿಯಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಕೇರಳದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನದಿಂದಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಕುಲಪತಿಗಳ ಸಭೆ ಕರೆದಿದ್ದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ವಿಶೇಷ ಕಾರ್ಯಾಚರಣೆಗೆ ಸೂಚಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...