
ಚಿಕ್ಕಮಗಳೂರು: ಚಿಕ್ಕಮಗಳೂರಿನ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮಾರ್ಚ್ 17ರವರೆಗೆ ಉರುಸ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಜಿಲ್ಲಾಡಳಿತದ ನೇತೃತ್ವದಲ್ಲಿ ಉರುಸ್ ಗೆ ಸಾವಿರಾರು ಮುಸ್ಲಿಂ ಬಾಂದವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ಪ್ಲಾನ್ ಮಾಡಿದ್ದರೆ ಈ ಬಗ್ಗೆ ಗಮನಹರಿಸಿ.
ಚಿಕ್ಕಮಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಇಂದಿನಿಂದ ಮಾರ್ಚ್ 17ರವರೆಗೆ ಚಂದ್ರದ್ರೋಣ ಪರ್ವತ ಸಾಲಿನ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ, ಸೀತಾಳಯ್ಯನಗಿರಿ, ಗಾಳಿಕೆರೆ ಸುತ್ತಮುತ್ತಲಿನ ಪ್ರದೇಶಗಳಿಗೆ ಜಿಲ್ಲಾಡಳಿತ ಪ್ರವಾಸಿಗರಿಗೆ ನಿಷೇಧ ಹೇರಿದೆ.