
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಮನೆಯ ಬಳಿ ದರೋಡೆ ಮಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ.
ಅಂತರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಗುಂಮ್ಡೇಟು ಹೊಡೆಯಲಾಗಿದೆ. ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ಕಾರ್ಯಾಚರಣೆ ಮೂವರು ಪೊಲೀಸ್ ಸಿಬ್ಬಂದಿಗಳಿಗೂ ಗಾಯಗಳಾಗಿವೆ. ಗಾಯಾಳು ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಆರೋಪಿಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.