
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕ್ಯಾಂಟರ್ ವಾಹನ ಐರಾವತ ಬಸ್, ಕಾರು ಹಾಗೂ ಆಟೋಗೆ ಡಿಕ್ಕಿ ಹೊಡೆದು, ಲಾರಿ ಹಾಗೂ ಬೈಕ್ ಗೂ ಗುದ್ದಿದೆ.
ಮೈಸೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಿಂತಿದ್ದ ಕಾರು, ಆಟೋ, ಬೈಕ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಆಟೋ ಅಪ್ಪಚ್ಚಿಯಾಗಿದೆ. ಇದೇ ವೇಳೆ ಐರಾವತ ಬಸ್ ಹಾಗೂ ಲಾರಿಗೂ ಕ್ಯಾಂಟರ್ ಗುದ್ದಿದೆ.
ಸರಣಿ ಅಪಘಾತ ಸಂಭವಿಸಿದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕ್ಯಾಂಟರ್ ಚಾಲಕ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.