ಬೆಂಗಳೂರು : ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಟಾಂಗ್ ನೀಡಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪಿಸಿ ಮೋಹನ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ವಾಗ್ವಾದ ಉಂಟಾಗಿತ್ತು.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ‘’ ಬಿಜೆಪಿ ಕಾರ್ಯಕ್ರಮವೂ ಅಲ್ಲ, ಕಾಂಗ್ರೆಸ್ ಕಾರ್ಯಕ್ರಮವೂ ಅಲ್ಲ!! ಅಲ್ಲಿ ನಡೆಯುತ್ತಿರುವುದು ಪವಾಡ ಪುರುಷ ಕೈವಾರ ತಾತಯ್ಯ ಅವರ ಜಯಂತಿ ಕಾರ್ಯಕ್ರಮ!! ನಿಮಗೆ ಅಷ್ಟೊಂದು ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಅಥವಾ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಹೋಗಿ!! ನಿಮ್ಮ ಪ್ರಚಾರದ ಹಪಾಹಪಿಗಾಗಿ ಪೂಜನೀಯ ಕೈವಾರ ತಾತಯ್ಯ ಅವರ ವೇದಿಕೆಗೆ ಅವಮಾನಿಸಬೇಡಿ’’ ಎಂದು ಕಿಡಿಕಾರಿದೆ.
ಆಕ್ಸಿಡೆಂಟಲ್ ಎಂ.ಎಲ್.ಎ @PNimmondige ಅವರೇ, ಅಲ್ಲಿ ನಡೆಯುತ್ತಿರುವುದು ಬಿಜೆಪಿ ಕಾರ್ಯಕ್ರಮವೂ ಅಲ್ಲ, ಕಾಂಗ್ರೆಸ್ ಕಾರ್ಯಕ್ರಮವೂ ಅಲ್ಲ!!
ಅಲ್ಲಿ ನಡೆಯುತ್ತಿರುವುದು ಪವಾಡ ಪುರುಷ ಕೈವಾರ ತಾತಯ್ಯ ಅವರ ಜಯಂತಿ ಕಾರ್ಯಕ್ರಮ!!
ನಿಮಗೆ ಅಷ್ಟೊಂದು ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಅಥವಾ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಹೋಗಿ!!
ನಿಮ್ಮ… pic.twitter.com/0NaiRpXxmU
— BJP Karnataka (@BJP4Karnataka) March 15, 2025