ಬೆಳಗಾವಿ : ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿಯಾಗಿ ಕಾರು ಅಪ್ಪಚ್ಚಿಯಾಗಿದ್ದು, ಇಬ್ಬರು ಪವಾಡಸದೃಶವಾಗಿ ಪಾರಾಗಿದ್ದಾರೆ.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಬಿದ್ದು ಕಾರು ಅಪ್ಪಚ್ಚಿಯಾಗಿದೆ. ಇಬ್ಬರು ಕಾರಿನೊಳಗೆ ಸಿಲುಕಿಕೊಂಡು ರಕ್ಷಣೆಗಾಗಿ ಕೈ ಬೀಸಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳೀಯರ ಸಹಾಯದಿಂದ ಸತತ 20-25 ನಿಮಿಷ ಕಾರ್ಯಾಚರಣೆ ನಡೆಸಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

ಬೆಳಗಾವಿ ನಗರದ ಹೊರವಲಯದ ಕೆಎಲ್ ಇ ಆಸ್ಪತ್ರೆ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಬದುಕುಳಿದಿದ್ದಾರೆ.