
ರಾಯಚೂರು: ಹೋಳಿ ಸಂಭ್ರಮದ ಬಳಿಕ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜಿಲ್ಲೆಯ ಸುಲ್ತಾನಪುರ ಹಾಗೂ ಯರಗಾ ಗ್ರಾಮಗಳಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ನೀರುಪಾಲಾಗಿದ್ದಾರೆ. ಸುಲ್ತಾನ್ ಪುರ ಹೊರವಲಯದ ಹೊಂಡದಲ್ಲಿ ಈಜಲು ತೆರಳಿದ್ದ ಸೋಮನಗೌಡ (45) ನಾಪತ್ತೆಯಾಗಿದ್ದರು. ಇದೀಗ ಅವರ ಶವ ಹೊಂಡದಲ್ಲಿ ಪತ್ತೆಯಾಗಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ರಾಯಚೂರುಇನ ಆರ್.ಆದಿ.ಎಸ್ ಕಾಲುಗೆ ಸ್ನಾನಕ್ಕೆಂದು ತೆರಳಿದ್ದ ಯರಗೇರಾ ಗ್ರಾಮದ ಮಹದೇವ (30) ನೀರುಪಾಲಾಗಿದ್ದು, ಶವವನ್ನು ಹೊರತೆಗೆಯಲಾಗಿದೆ.
ಇಡಪನೂರು ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.