HomeKarnatakaತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ

ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ, ಪಟ್ಟಣ ಪಂಚಾಯತ್ ಸದಸ್ಯ ತಹಶೀಲ್ದಾರ್ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ರಫೀಕ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ. ರಫಿಕ್, ಚಿಕ್ಕಮಗಳೂರು ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ. ಶೃಂಗೇರಿಯಲ್ಲಿ ಕಲ್ಲಂಗಡಿ ಹಣ್ಣು ಮಾರಾಟಕ್ಕಾಗಿ ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿ ಹಣ್ಣು ಮಾರಾಟ ಮಾಡುತ್ತಿದ್ದರು. ಅಕ್ರಮವಾಗಿ ಶೆಡ್ ನಿರ್ಮಿಸಿದ್ದಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಸಮ್ಮುಖದಲ್ಲಿ ಅಧಿಕಾರಿಗಳು ತೆರವಿಗೆ ಮುಂದಾಗಿದ್ದಾರೆ. ಈ ವೇಳೆ ಅವರ ಎದುರಲ್ಲೇ ರಫಿಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಡವರು ಶೆಡ್ ನಿರ್ಮಿಸಿದರೆ ತಪ್ಪು. ಶ್ರೀಮಂತರು ಕೆರೆ ಒತ್ತುವರಿ, ಬೆಟ್ಟ ಒತ್ತುವರಿ ಮಾಡಿ ಅಪಾರ್ಟ್ ಮೆಂಟ್ ಕಟ್ಟಿದರೂ ತಪ್ಪಿಲ್ಲ. ಬಡವರು ಜೀವನ ಸಾಗಿಸಲು ಶೆಡ್ ನಿರ್ಮಿಸಿಕೊಂಡರೆ ಅದನ್ನು ತೆರವು ಮಾಡುತ್ತಿದ್ದಾರೆ ಎಂದು ಕಣ್ಣೀರಿಡುತ್ತಾ ವಿಷ ಸೇವಿಸಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular