alex Certify ಇಂದು ಅಂಬರೀಶ್ ಮೊಮ್ಮಗನ ನಾಮಕರಣ: ಭಾಗಿಯಾಗ್ತಾರಾ ಮನೆಮಗ ದರ್ಶನ್ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಅಂಬರೀಶ್ ಮೊಮ್ಮಗನ ನಾಮಕರಣ: ಭಾಗಿಯಾಗ್ತಾರಾ ಮನೆಮಗ ದರ್ಶನ್ ?

ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ನಾಮಕರಣ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮೊಮ್ಮಗನ ನಾಮಕರಣ ಕಾರ್ಯಕ್ರಮ ಇಂದು ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಲಿದ್ದು, ಈ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಈ ನಾಮಕರಣ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗಿಯಾಗುತ್ತಾರಾ ಎಂಬ ಪ್ರಶ್ನೆ ಎಲ್ಲರ ಮನದಲ್ಲಿದೆ. ಇತ್ತೀಚೆಗೆ ದರ್ಶನ್ ಅವರು ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅಭಿಷೇಕ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಅನ್‌ಫಾಲೋ ಮಾಡಿದ್ದರು. ಇದರಿಂದ ಅಂಬರೀಶ್ ಕುಟುಂಬದ ಮೇಲೆ ದರ್ಶನ್‌ಗೆ ಮುನಿಸು ಎಂದು ಹೇಳಲಾಗಿತ್ತು. ಆದರೆ, ಆ ರೀತಿಯ ಮುನಿಸು ಯಾವುದೂ ಇಲ್ಲ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ದರ್ಶನ್ ಯಾವತ್ತಿದ್ದರೂ ಮನೆಮಗ ಎಂದು ಹೇಳಿದ್ದಾರೆ.

ಅಭಿಷೇಕ್ ಮತ್ತು ಅವಿವಾ ದಂಪತಿಯ ಮಗುವಿನ ನಾಮಕರಣಕ್ಕೆ ದರ್ಶನ್ ಬರುತ್ತಾರಾ ? ಬರಲ್ವಾ ಎಂಬ ಕುತೂಹಲ ಎಲ್ಲರಲ್ಲಿದೆ.

ಸುಮಲತಾ ಅವರ ಮನೆಯಲ್ಲಿ ನಡೆದಿರುವ ಎಲ್ಲ ಸಮಾರಂಭಗಳಿಗೂ ದರ್ಶನ್ ಭಾಗಿಯಾಗಿದ್ದಾರೆ. ಅವರು ಎಷ್ಟೇ ಬ್ಯುಸಿಯಾಗಿದ್ದರೂ ಸುಮಲತಾ ಅವರ ಮನೆಯ ಎಲ್ಲ ಕಾರ್ಯಕ್ರಮಗಳಿಗೆ ಹಾಜರಾಗಿದ್ದಾರೆ. ಸುಮಲತಾ ಪರವಾಗಿ ಚುನಾವಣಾ ಪ್ರಚಾರಗಳಲ್ಲಿಯೂ ಭಾಗಿಯಾಗಿದ್ದರು. ಅವರ ರಾಜಕೀಯ ಪಯಣಕ್ಕೂ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ. ಆದ್ದರಿಂದ ಈ ನಾಮಕರಣ ಸಮಾರಂಭಕ್ಕೆ ದರ್ಶನ್ ಬರುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ದರ್ಶನ್ ಮತ್ತು ಅಂಬರೀಶ್ ಕುಟುಂಬದ ನಡುವಿನ ಬಾಂಧವ್ಯವು ಹಲವು ವರ್ಷಗಳಿಂದಲೂ ಗಟ್ಟಿಯಾಗಿದೆ. ಈ ನಾಮಕರಣ ಕಾರ್ಯಕ್ರಮವು ಈ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...