
ರಾಯಚೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದೆ. ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆರೋಪ ಕೇಳಿಬಂದಿದೆ.
ರಾಯಚೂರು ಜಿಲ್ಲೆಯ ಸಿರಿವಾರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ನೇತ್ರಾವತಿ (33) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಗಳನ್ನು ಹತ್ಯೆ ಮಾಡಿ ಬಳಿಕ ನೇಣು ಬಿಗಿದಿರುವುದಾಗಿ ನೇತ್ರಾವತಿ ಪೋಷಕರು ಅಳಿಯನ ವಿರುದ್ಧ ಆರೋಪ ಮಾಡಿದ್ದಾರೆ.
ಪತಿ ಶರಣ ಬಸವರಾಜ್ ವಿರುದ್ಧ ಆರೋಪ ಮಾಡಿರುವ ನೇತ್ರಾವತಿ ಪೋಷಕರು ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.