
ಬೀದರ್: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಉಡುಬಾಳ ಗ್ರಾಮದ ಕ್ರಾಸ್ ಬಳಿ ನಡೆದಿದೆ.
ಉಮೇಶ್ (26) ಮೃತ ಯುವಕ. ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಉಡುಬಾಳ ಗ್ರಾಮದಿಂದ ಮನ್ನಾಕೇಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಬೆಮ್ಮಳಖೇಡಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.