
ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಯುವಕರ ಮೇಲೆ ಪುಂಡರು ಹಲ್ಲೆ ನಡೆಸಿದ್ದಾರೆ. ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿ ಘಟನೆ ನಡೆದಿದೆ.
ಕಾರ್ ಗೆ ಪೆಟ್ರೋಲ್ ಹಾಕಿಸುತ್ತಿದ್ದ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಯುವಕರನ್ನು ರಕ್ಷಣೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಲ್ಲೆಕೋರಲ್ಲಿ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.