
ಹಾವೇರಿ: ಮಾಸೂರಿನ ಸ್ವಾತಿ ರಮೇಶ್ ಬ್ಯಾಡಗಿ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಸೂರು ಬಂದ್ ಗೆ ಕರೆ ನೀಡಲಾಗಿದೆ.
ಸ್ವಾತಿ ಬ್ಯಾಡಗಿ ಹತ್ಯೆ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಪಟ್ಟಣ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಸೇರಿ ಹಲವು ಸಂಘಟನೆಗಳು ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿವೆ.
ಬೆಳಿಗ್ಗೆ 11 ಗಂಟೆಗೆ ಮಾಸೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದೆ.