
ನವದೆಹಲಿ: ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ತಯಾರಿಕೆಯಲ್ಲಿ ಖಾದ್ಯ ತೈಲ ಬಳಕೆಯನ್ನು ಶೇಕಡ 10 ರಷ್ಟು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಪಿಎಂ ಪೋಷಣ್ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿಯಲ್ಲಿ ಅಡುಗೆ ಎಣ್ಣೆ ತಯಾರಿಸುವಾಗ ಶೇಕಡ 10ರಷ್ಟು ಖಾದ್ಯ ತೈಲ ಬಳಕೆ ಕಡಿಮೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಯದರ್ಶಿ ಸಂಜಯ್ ಕುಮಾರ್ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.
ದೇಶಾದ್ಯಂತ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಸ್ಥೂಲಕಾಯ, ಹೃದ್ರೋಗ ಸಮಸ್ಯೆ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಕರೆ ನೀಡಿದ್ದರು. ಇದೀಗ ಬಿಸಿಯೂಟದಲ್ಲಿ ಎಣ್ಣೆ ಬಳಕೆ ಶೇ, 10 ರಷ್ಟು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.