
ರಾಯಚೂರು: ರಾಯಚೂರಿನಲ್ಲಿ ನಕಲಿ ದಂಧೆಯ ಮೇಲೆ ಪೊಲೀಸರಿಂದ ದಾಳಿ ನಡೆಸಲಾಗಿದ್ದು, ರಾಯಚೂರಿನ ಡಿಎಆರ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಪ್ರಮುಖ ಆರೋಪಿ ಸದ್ದಾಮ್ ಅಲಿಯಾಸ್ ಮೊಹಮ್ಮದ್ ಯಾಸಿನ್, ರಾಯಚೂರಿನ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಮರಿಲಿಂಗ, ರಮೇಶ ಆದಿ, ಶಿವಲಿಂಗ ಅವರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.
ದಾಳಿಯ ವೇಳೆ ಬಿಳಿ ಕಾಗದ, ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಹಾಗೂ ರಾಯಚೂರು ಪಶ್ಚಿಮ ಠಾಣೆ ಪೋಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿಗಳು ನಕಲಿ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದರು. ರಾಯಚೂರು ಜಿಲ್ಲೆಯ ವಿವಿಧೆಡೆ ನಕಲಿ ನೋಟುಗಳನ್ನು ಚಲಾವಣೆ ಮಾಡಿದ್ದಾರೆ ಎನ್ನಲಾಗಿದ್ದು, ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.