
ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ದಿನಾಂಕ 18-04-2025 ರಂದು ಕನ್ನಡ ಭಾಷೆ ಪರೀಕ್ಷೆಯನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಸದರಿ ದಿನಾಂಕ ಗುಡ್ ಪ್ರೈಡೆಯಾಗಿರುವುದರಿಂದ ಕೆಲವು ಅಭ್ಯರ್ಥಿಗಳು ದಿನಾಂಕವನ್ನು ಬದಲಾಯಿಸಿಲು ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕನ್ನಡ ಭಾಷೆ ಪರೀಕ್ಷೆಯನ್ನು ಈಗ ದಿನಾಂಕ 18-04-2025 ರ ಬದಲಾಗಿ 15-04-2025 (ಮಂಗಳವಾರ) ರಂದು ನಡೆಸಲಾಗುವುದು.
ಈಗಾಗಲೇ ನಿಗದಿಪಡಿಸಿ ಪ್ರಕಟಿಸಿರುವಂತೆ ಸಿಇಟಿ 2025 ರ ಪರೀಕ್ಷೆಗಳು 16-04-2025 ಮತ್ತು 17-04-2025 ರಂದು ನಡೆಸಲಾಗುವುದು, ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ (ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ)
15-04-2025 ರಂದು ಬೆಳಿಗ್ಗೆ 10.30 ರಿಂದ 11.30ರ ವರೆಗೆ ನಡೆಸಲಾಗುವುದು.
ಸಿಇಟಿ-2025ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಸದ್ಯದಲ್ಲಿಯೇ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ಅನ್ನು ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ದೂರವಾಣಿ: 080-23 564 583
ಸಹಾಯವಾಣಿ: 080-23 460 460.
ಇ-ಮೇಲ್: keauthority-ka@nic.in
ವೆಬ್‌ಸೈಟ್: http://kea.kar.nic.in
