
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕರು, ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸುಮಾರು 2800 ಬೋಧಕರ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಹುದ್ದೆಗಳನ್ನು ಭರ್ತಿ ಮಾಡುತ್ತಾ ಬಂದಿದ್ದು, ಹಂತ ಹಂತವಾಗಿ ಎಲ್ಲ ಬೋಧಕರು, ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.