HomeInternationalBREAKING: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ 6 ವರ್ಷದ ಬಾಲಕ ಸೇರಿ ಒಂದೇ ಕುಟುಂಬದ ಮೂವರು ಭಾರತೀಯರು...

BREAKING: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ 6 ವರ್ಷದ ಬಾಲಕ ಸೇರಿ ಒಂದೇ ಕುಟುಂಬದ ಮೂವರು ಭಾರತೀಯರು ಸಾವು

ಹೈದರಾಬಾದ್: ಅಮೆರಿಕದ ಫ್ಲೋರಿಡಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ತೆಲಂಗಾಣದ ಕುಟುಂಬದ ಮೂವರು ಸದಸ್ಯರಲ್ಲಿ ಮಹಿಳಾ ಸಾಫ್ಟ್‌ ವೇರ್ ವೃತ್ತಿಪರೆ ಮತ್ತು ಅವರ ಆರು ವರ್ಷದ ಮಗ ಸೇರಿದ್ದಾರೆ ಎಂದು ಅವರ ಸಂಬಂಧಿಕರು ಸೋಮವಾರ ಇಲ್ಲಿ ತಿಳಿಸಿದ್ದಾರೆ.

ಪ್ರಗತಿ ರೆಡ್ಡಿ(35), ಅವರ ಮಗ ಮತ್ತು ಅತ್ತೆ(56) ಸಾವನ್ನಪ್ಪಿದ್ದಾರೆ ಮತ್ತು ಕಾರ್ ಚಾಲನೆ ಮಾಡುತ್ತಿದ್ದ ಅವರ ಪತಿ ಟ್ರಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಮಹಿಳೆಯ ತಂದೆ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಕುಟುಂಬವು ರಂಗಾರೆಡ್ಡಿ ಜಿಲ್ಲೆಯ ತೇಕುಲಪಲ್ಲಿ ಗ್ರಾಮದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಮಗಳು 2012 ರಲ್ಲಿ ಅಮೆರಿಕಕ್ಕೆ ಹೋಗಿದ್ದಳು ಮತ್ತು ಅಲ್ಲಿ ಎಂಎಸ್ ಮಾಡಿದ್ದಳು. ಇಂದು ಬೆಳಿಗ್ಗೆ 4 ಗಂಟೆಗೆ ತಪ್ಪು ಮಾರ್ಗದಲ್ಲಿ ಬಂದ ವಾಹನವು ನಮ್ಮ ಕುಟುಂಬ ಪ್ರಯಾಣಿಸುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿತು. ಅಪಘಾತದ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ. ನನ್ನ ಅಳಿಯ ಮತ್ತು ನನ್ನ ಎಂಟು ತಿಂಗಳ ಮೊಮ್ಮಗ ಬದುಕುಳಿದರು ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಟೇಕುಲಪಲ್ಲಿ ಸ್ಥಳೀಯ ಸಂಸ್ಥೆಯ ಮಾಜಿ ಪ್ರತಿನಿಧಿ ಮೋಹನ್ ರೆಡ್ಡಿ ಅವರು ಅಮೆರಿಕಕ್ಕೆ ತೆರಳುವುದಾಗಿ ಹೇಳಿದ್ದಾರೆ.

ಮೋಹನ್ ರೆಡ್ಡಿ ಅವರ ಕುಟುಂಬದ ಮತ್ತೊಬ್ಬ ಸದಸ್ಯರ ಪ್ರಕಾರ, ಪ್ರಗತಿ ರೆಡ್ಡಿ ಅವರ ಕುಟುಂಬ ವಾರಾಂತ್ಯದ ಪ್ರವಾಸದ ನಂತರ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular