ಗಾಝಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಸಾವಿನ ಸಂಖ್ಯೆ 200ಕ್ಕೆ ಏರಿಕೆಯಾಗಿದೆ.
ಇಸ್ರೇಲ್ ಮಂಗಳವಾರ ಮುಂಜಾನೆ ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು. ಫೆಲೆಸ್ತೀನ್ ಅಧಿಕಾರಿಗಳು ಕನಿಷ್ಠ 200 ಸಾವುಗಳನ್ನು ವರದಿ ಮಾಡಿದ್ದಾರೆ.
ಕದನ ವಿರಾಮವನ್ನು ವಿಸ್ತರಿಸುವ ಮಾತುಕತೆಯಲ್ಲಿ ಪ್ರಗತಿಯs ಕೊರತೆಯಿಂದಾಗಿ ಈ ದಾಳಿಗೆ ಆದೇಶಿಸಿದ್ದೇನೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಕಾರ್ಯಾಚರಣೆಯು ಮುಕ್ತವಾಗಿದೆ ಮತ್ತು ವಿಸ್ತರಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.”ಇಸ್ರೇಲ್ ಇನ್ನು ಮುಂದೆ ಹಮಾಸ್ ವಿರುದ್ಧ ಮಿಲಿಟರಿ ಬಲವನ್ನು ಹೆಚ್ಚಿಸುವ ಮೂಲಕ ಕ್ರಮ ಕೈಗೊಳ್ಳುತ್ತದೆ” ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ.