ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯಲ್ಲಿ, 22 ವರ್ಷದ ಮಹಿಳೆಯೊಬ್ಬಳು ತನ್ನ 17 ದಿನದ ಹೆಣ್ಣು ಮಗುವನ್ನು ನೀರಿನ ಟ್ಯಾಂಕ್ ಗೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಶ್ರೀ ರಾಮ್ ಕಾಲೋನಿಯ ಆಚ್ಕಿ ದೇವಿ ಎಂದು ಗುರುತಿಸಲ್ಪಟ್ಟ ಮಹಿಳೆ ಗಂಡು ಮಗುವಿಗೆ ಜನ್ಮ ನೀಡದ ಕಾರಣ ಅಸಮಾಧಾನಗೊಂಡಿದ್ದಳು ಎಂದು ವರದಿಯಾಗಿದೆ. ಹತಾಶೆಯಲ್ಲಿ ಅವಳು ಮಗುವನ್ನು ನೀರಿನ ಟ್ಯಾಂಕ್ ಗೆ ಎಸೆದು ಸೂಸೈಡ್ ಮಾಡಿಕೊಂಡಿದ್ದಾಳೆ.
ದೂರಿನ ಮೇರೆಗೆ ಅಧಿಕಾರಿಗಳು ಮಹಿಳೆಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಆಕೆಯನ್ನು ಸೋಮವಾರ ವಶಕ್ಕೆ ತೆಗೆದುಕೊಂಡು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ನಂತರ ಅವಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.