
ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಹಿಂದುಳಿದ ವರ್ಗ ಪ್ರವರ್ಗ 2 ಬಿ ಗೆ ಸೇರಿದವರಿಗೆ ಶೇಕಡ 4ರಷ್ಟು, ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ತಿದ್ದುಪಡಿ) ವಿಧೇಯಕ 2025ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿಧೇಯಕ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಸಾರ್ವಜನಿಕ ಸರಕು ಹಾಗೂ ಸರ್ಕಾರಿ ಕಾಮಗಾರಿಗಳ ಗುತ್ತಿಗೆಗಳಲ್ಲಿ ಮೀಸಲಾತಿ ನೀಡುವ ವಿಧೇಯಕ ಮಂಡಿಸಿದ್ದಾರೆ.
ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ. ಮೊತ್ತದವರೆಗೆ ಶೇಕಡ 4ರಷ್ಟು ಮೀರದಂತೆ ಹಿಂದುಳಿದ ಪ್ರವರ್ಗ 2ಬಿ ಗೆ ಸೇರಿದವರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಸರ್ಕಾರಿ ನಿರ್ಮಾಣ ಕಾಮಗಾರಿಗಳಲ್ಲಿ ಒಂದು ಕೋಟಿ ರೂ. ಮೊತ್ತದ ಮೀಸಲಾತಿಯನ್ನು ಎರಡು ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಇದರಲ್ಲಿ ಇದುವರೆಗೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಮಾತ್ರ ಮೀಸಲಾತಿ ಇತ್ತು. ಪ್ರವರ್ಗ 2ಬಿ ಗೂ ಅವಕಾಶ ಕಲ್ಪಿಸಲಾಗಿದೆ.