
ಕೊಪ್ಪಳ: ಮರಳು ತುಂಬಿದ್ದ ಟಿಪ್ಪರ್ ಹರಿದು ಯುವಕರಿಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಸಮೀಪ ಅಪಘಾತ ಸಂಭವಿಸಿದೆ.
ರಮೇಶ ಜವಳಗೇರಿ(27), ಸಿದ್ದಪ್ಪ ಪ್ಯಾಟಿಹಾಳ(34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯುವಕರು ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದಾರೆ.
ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕೆಂದು ಜನ ಆಗ್ರಹಿಸಿದ್ದಾರೆ. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.