
ಬೆಂಗಳೂರು: ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ನಾವು ಕೊಟ್ಟ ವಾಗ್ದಾನದಂತೆ ನಡೆದುಕೊಳ್ಳುತ್ತೇವೆ. ಯೋಜನೆಯನ್ನು ನಿಲ್ಲಿಸುವ ಪ್ರಶ್ನೆ ಇಲ್ಲ. ಯೋಜನೆ ಅಡಿಯ ಆರ್ಥಿಕ ಸಹಾಯ ನೀಡಲು ಸರ್ಕಾರ ಭದ್ರವಾಗಿದೆ. ಕೆಲವು ತಾಂತ್ರಿಕ ಕಾರಣದಿಂದ ಆರ್ಥಿಕ ನೆರವು ನೀಡುವುದು ವಿಳಂಬವಾಗಿರಬಹುದು. ಆದರೆ ಯೋಚನೆ ಸ್ಥಗಿತವಾಗಿದೆ ಎಂದು ಭಾವಿಸಬೇಕಿಲ್ಲ. ನಿಯಮಗಳ ಅನುಸಾರ ಅನುದಾನ ನೀಡಲಾಗಿದೆ ಎಂದರು.
ಪದವಿ ಪಡೆದು ನಿರುದ್ಯೋಗಿಗಳಾಗಿರುವ ಎಲ್ಲ ಯುವಕರಿಗೂ ಈ ಯೋಜನೆಯ ಲಾಭ ದೊರಕಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಯುವನಿಧಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
