ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‍ಪ್ರನರ್‍ಶಿಪ್ ಪ್ರೋಗ್ರಾಮ್(ಇಪಿ) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ನಡೆಸಲು ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ.
ಅದರಂತೆ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 02 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 01 ಅಭ್ಯರ್ಥಿಗಳ ಗುರಿಯಷ್ಟು ಸರ್ಕಾರದ ಮಾರ್ಗಸೂಚಿಯನ್ವಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.
ಈ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್, 25 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ -571201 ದೂ.ಸಂ. 08272-200519 ಅಥವಾ ಈ-ಮೇಲ್ ddkodagutourism@gmail.com ಗೆ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.