
ಬೆಂಗಳೂರು: ಮಾರಕಾಸ್ತ್ರಗಳನ್ನು ಝಳಪ್ಪಿಸುತ್ತಾ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಮಹೇಶ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು. ಔಟರ್ ರಿಂಗ್ ರಸ್ತೆಯ ಚೌಡೇಶ್ವರಿ ನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರಗಳನ್ನು ರಸ್ತೆಗೆ ಉಜ್ಜುತ್ತಾ, ಸ್ಕೂತರ್ ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇಬ್ಬರು ಯುವಕರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಏರಿಯಾದಲ್ಲಿ ಭಯ ಹುಟ್ಟಿಸಲೆಂದು ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ಪುಂಡರು ಒಪ್ಪಿಕೊಂಡಿದ್ದಾರೆ.