
ಚಿಕ್ಕಬಳ್ಳಾಪುರ: ಯುವತಿ ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಗಿರೀಶ್ (24) ಆತ್ಮಹತ್ಯೆ ಮಾಡಿಕೊಂದಿರುವ ಯುವಕ. ಮಾರ್ಚ್ 11ರಂದು ಯುವತಿಯ ಕಚೇರಿ ಬಳಿ ತೆರಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ತ್ರೆಗೆ ದಾಖಲಿಸಲಾಗಿತ್ತು.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.