alex Certify BREAKING NEWS: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಎ2 ತರುಣ್ ರಾಜು ಜಾಮೀನು ಅರ್ಜಿ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಎ2 ತರುಣ್ ರಾಜು ಜಾಮೀನು ಅರ್ಜಿ ವಜಾ

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಎರಡನೇ ಆರೋಪಿ, ನಟ ತರುಣ್ ರಾಜು ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟು, ನ್ಯಾಯಾಂಗ ಬಂಧನದಲ್ಲಿರುವ ಉದ್ಯಮಿ ಪುತ್ರ, ತೆಲುಗು ನಟ ತರುಣ್ ರಾಜು ಜಾಮೀನಿಗಾಗಿ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ತರುಣ್ ರಾಜು ಅರ್ಜಿ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ತರುಣ್ ರಾಜುಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ಈ ಹಿಂದೆ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನೂ ಕೋರ್ಟ್ ವಜಾಗೊಳಿಸಿತ್ತು. ತರುಣ್ ರಾಜು ನಟಿ ರನ್ಯಾ ರಾವ್ ಸ್ನೇಹಿತನಾಗಿದ್ದು, ಇಬ್ಬರೂ ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...