ರಾಜಸ್ಥಾನದ ಹನುಮಾನ್‌ಗಢದಲ್ಲಿ ಮನರಂಜನೆಯ ಹೆಸರಿನಲ್ಲಿ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವ ಘಟನೆಯೊಂದು ಬೆಳಕಿಗೆ ಬಂದಿದೆ. ಎತ್ತರದ ವೇದಿಕೆಯ ಮೇಲೆ ನಿಲ್ಲಿಸಿದ ಒಂಟೆಯೊಂದರ ಕಾಲುಗಳನ್ನು ಕಟ್ಟಿ, ಬಿಸಿಲಿನಲ್ಲಿ ನಿಲ್ಲಿಸಿ ಅದರ ಮೇಲೆ ಮಹಿಳೆಯೊಬ್ಬರು ನೃತ್ಯ ಮಾಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ವಿಡಿಯೋವನ್ನು ಮುಂಬೈನ ಸ್ಟ್ರೀಟ್ ಡಾಗ್ಸ್ ಆಫ್ ಮುಂಬೈ ಎಂಬ ಪ್ರಾಣಿ ಕಲ್ಯಾಣ ಸಂಸ್ಥೆ ಹಂಚಿಕೊಂಡಿದ್ದು, “ಇದು ಸಂಸ್ಕೃತಿಯಲ್ಲ, ಕ್ರೌರ್ಯ” ಎಂದು ಖಂಡಿಸಿದೆ. ಈ ಘಟನೆಯು ಸಂಸ್ಕೃತಿಯ ಹೆಸರಿನಲ್ಲಿ ಪ್ರಾಣಿಗಳನ್ನು ನಡೆಸಿಕೊಳ್ಳುವ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಮತ್ತು ಇತರ ಪ್ರಾಣಿ ಹಕ್ಕುಗಳ ಸಂಘಟನೆಗಳು ಈ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರಾಣಿ ಪ್ರಿಯರು ಈ ಕೃತ್ಯವನ್ನು ಖಂಡಿಸಿದ್ದಾರೆ. “ಇದು ಹೃದಯ ವಿದ್ರಾವಕವಾಗಿದೆ” ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಹನುಮಾನ್‌ಗಢದ ಅಧಿಕಾರಿಗಳು ಈ ಘಟನೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
View this post on Instagram
