ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch

ದೆಹಲಿಯ ನಿಹಾಲ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ದರೋಡೆ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರ ಸರವನ್ನು ಕಸಿದು ಪರಾರಿಯಾಗಿದ್ದಾರೆ.

ಗುರುನಾನಕ್ ವಿಹಾರ್, ಚಂದರ್ ವಿಹಾರ್‌ನಲ್ಲಿ ಈ ಘಟನೆ ಸಂಭವಿಸಿದೆ. ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆಯಿಂದ ಮಹಿಳೆ ಆಘಾತಕ್ಕೊಳಗಾಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read