ಬೆಂಗಳೂರು : ರಾಮನಗರ ಜಿಲ್ಲೆ ಮರುನಾಮಕರಣ ಮಾಡುವುದು ಹೇಗೆ ಎಂದು ನನಗೆ ತಿಳಿದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಚಾಲೆಂಜ್ ಹಾಕಿದ್ದಾರೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲೆಗೆ ಮರುನಾಮಕರಣ ಮಾಡಲು, ಸಂವಿಧಾನದಲ್ಲಿ ನಾವು ಯಾರನ್ನೂ ಕೇಳುವ ಅಗತ್ಯವಿಲ್ಲ.
ದೆಹಲಿಯಲ್ಲಿರುವ ಕೆಲವು ಮಂತ್ರಿಗಳು ಈ ವಿಚಾರದಲ್ಲಿ ಷಡ್ಯಂತ್ರ ನಡೆಸಿದ್ದಾರೆ .. ಅದಕ್ಕೆಲ್ಲಾ ನಾವು ಜಗ್ಗಲ್ಲ.. ಜಿಲ್ಲೆಯನ್ನು ಹೇಗೆ ಬದಲಾಯಿಸಬೇಕು ಎಂಬುದು ನನಗೆ ಗೊತ್ತಿದೆ. ರಾಮನಗರ ಜಿಲ್ಲೆ ಮರುನಾಮಕರಣ ಮಾಡುವುದು ಹೇಗೆ ಎಂದು ನನಗೆ ತಿಳಿದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಚಾಲೆಂಜ್ ಹಾಕಿದ್ದಾರೆ.
ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ
ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಾವು ಯಾರಿಗೂ ಹಾನಿ ಮಾಡದೆ ಕಾರ್ಯಕ್ರಮ ಮಾಡುತ್ತೇವೆ. ಇದು ರಾಜಕೀಯ ಕಾರ್ಯಕ್ರಮವಲ್ಲ, ಸರ್ಕಾರಿ ಕಾರ್ಯಕ್ರಮ. ನಾಳೆ ನಡೆಯಲಿರುವ ಕಾವೇರಿ ಆರತಿ ಪೂಜಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲಾ ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಿ, ನೀರಿನ ಉಳಿತಾಯ ಮಾಡಬೇಕು ಎಂದು ತಿಳಿಸಿದರು.