alex Certify BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ (OPS) ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ (OPS) ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ದಿ:01.04.2006 ಅಧಿಸೂಚನೆಗಳ ಪೂರ್ವದಲ್ಲಿನ ನೇಮಕಾತಿ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30.06.2024ರೊಳಗ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು.

ಮುಂದುವರೆದು, ದಿನಾಂಕ:24.01.2024ರ ಸರ್ಕಾರಿ ಆದೇಶದನ್ವಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...