ಕನಕಪುರ : ರಾಜ್ಯದಲ್ಲಿ ರಾಕ್ಷಸಿ ಕೃತ್ಯವೊಂದು ನಡೆದಿದ್ದು, ಮಗುವಿನ ಕೈಗೆ ಬರೆ ಹಾಕಿ, ಗುದದ್ವಾರಕ್ಕೆ ಕಾರದಪುಡಿ ಹಾಕಿ ಅಂಗನವಾಡಿ ಸಹಾಯಕಿ ರಾಕ್ಷಸಿ ವರ್ತನೆ ತೋರಿಸಿದ ಘಟನೆ ಕನಕಪುರದಲ್ಲಿ ನಡೆದಿದೆ.
ಮಗುವಿನ ಮೇಲೆ ಅಂಗನವಾಡಿ ಸಹಾಯಕಿ ಚಾಕುವಿನಿಂದ ಬರೆ ಹಾಕಿ ಗುದದ್ವಾರಕ್ಕೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದಾಳೆ.ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಪಟ್ಟಣದ ಜ್ಯೋತಿ ಬಾಯಿ ಮತ್ತು ರಮೇಶ್ ದಂಪತಿಯ ಪುತ್ರ ದೀಕ್ಷಿತ್ ಎಂಬ ಮಗುವಿನ ಮೇಲೆ ಈ ಕೃತ್ಯ ಎಸಗಲಾಗಿದೆ. ಕಾದ ಚಾಕುವಿನಿಂದ ಬರೆ ಹಾಕಿ ಗುದದ್ವಾರಕ್ಕೆ ಖಾರದಪುಡಿ ಹಾಕಿದ್ದಾಳೆ.
ಮಗು ಜೋರಾಗಿ ಅಳುತ್ತಿರುವುದನ್ನು ಕಂಡ ತಾಯಿ ಕೂಡಲೇ ಅಂಗನವಾಡಿ ಕೇಂದ್ರದ ಬಳಿ ಬಂದು ಮಗುವನ್ನು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಏನೂ ತಪ್ಪು ಮಾಡದಿದ್ದರೂ ಮಗುವಿಗೆ ಈ ರೀತಿ ಮಾಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.