ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದ ಮಾರ್ಚ್ 21, 2025 ರಿಂದ ಏಪ್ರಿಲ್ 4, 2025 ರವರಿಗೆ ಎಸ್. ಎಸ್. ಎಲ್. ಸಿ. ವಾರ್ಷಿಕ-1 ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳು ನಡೆಯುವ ದಿನಗಳಂದು ವಿದ್ಯಾರ್ಥಿಗಳಿಗೆ ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್. ಎಸ್. ಎಲ್ .ಸಿ. ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಸಂಚಾರ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೋರಿಕೆ ನಿಲ್ಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರಿ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.