ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸುದ್ದಿ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದೆ. ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ನೀಡಲಿ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ನೀಡಲಿ, ಸ್ವಪಕ್ಷದ ಸಚಿವರುಗಳಿಗೆಅವರ ಪಕ್ಷದದವರೇ ಹನಿಟ್ರ್ಯಾಪ್ ಮಾಡುತ್ತಾರೆ ಅಂದರೆ ಏನರ್ಥ..? ಇದು ನಾಚಿಕೆಗೇಡಿನ ಸಂಗತಿ.! ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ನೀಡಲಿ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಪ್ರಭಾವಿ ಸಚಿವರೊಬ್ಬರಮೇಲೆ ಹನಿಟ್ರ್ಯಾಪ್ ಷಡ್ಯಂತ್ರ ನಡೆದಿದೆ ಎಂಬ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಬಹಿರಂಗಪಡಿಸಿದ್ದಾರೆ. ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಶಾಸಕ ಯತ್ನಾಳ್, ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಈ ವೇಳೆ ಯತ್ನಾಳ್ ಹೇಳಿಕೆಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದು ಮಾತು ಪ್ರಾರಂಭಿಸಿದ ಸಚಿವ ಕೆ.ಎನ್.ರಾಜಣ್ಣ, ಕರ್ನಾಟಕ ಸಿಡಿ ಫ್ಯಾಕ್ಟರಿಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. 48 ಜನರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿದೆ. ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಹೇಳಿದರು.