ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಮುಂದಿನ ಐದು ದಿನಗಳ ಹವಾಮಾನ ವರದಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದು, “ರಾಜ್ಯದ ಕರಾವಳಿ, ಗುಡ್ಡಗಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ” ಎಂದು ಬರೆದುಕೊಂಡಿದೆ.
ಶುಕ್ರವಾರದಿಂದ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾ, ಬಂಗಾಳಕೊಲ್ಲಿ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಾಗುತ್ತಿವೆ.
ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಕೊಡಗು. ಹಾಸನ, ಚಿಕ್ಕಮಗಳೂರು. ಚಿಕ್ಕಬಳ್ಳಾಪುರ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗಿದೆ. ಶೃಂಗೇರಿ, ಕೊಪ್ಪ, ಜಯಪುರ ಸೇರಿದಂತೆ ಜಿಲ್ಲೆಯ ಹಲವು ಕಡೆ ಸತತ 1 ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆಯಾಗಿದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. #KSNDMC— Karnataka State Natural Disaster Monitoring Centre (@KarnatakaSNDMC) March 21, 2025