HomeKarnatakaBIG NEWS : ರಾಜ್ಯದ ವಾಹನ ಸವಾರರೇ ಗಮನಿಸಿ : 'HSRP' ನಂಬರ್ ಪ್ಲೇಟ್ ಅಳವಡಿಸಲು...

BIG NEWS : ರಾಜ್ಯದ ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮಾ 31 ಕೊನೆಯ ದಿನ.!

ಬೆಂಗಳೂರು : ಹಳೆ ವಾಹನಗಳಿಗೆ ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿರುವ ವಿಚಾರ ನಿಮಗೆ ಗೊತ್ತಿದೆ. ಹೌದು. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದ ರಾಜ್ಯ ಸರ್ಕಾರ ಮಾ.31 ರವರೆಗೆಡುವು ವಿಸ್ತರಣೆ ಮಾಡಿದೆ.

ರಾಜ್ಯ ಸರ್ಕಾರ 7 ಬಾರಿ ಅವಧಿ ವಿಸ್ತರಣೆ ಮಾಡಿದ್ದು, ವಾಹನ ಸವಾರರು ನಂಬರ್ ಪ್ಲೇಟ್ ನೋಂದಾಯಿಸಲು ನಿರಾಸಕ್ತ ವಹಿಸುತ್ತಿದ್ದಾರೆ. HSRP ಅಳವಡಿಕೆಗೆ ಡಿ 31 ಕೊನೆ ದಿನವಾಗಿತ್ತು. ನಂತರ ಜ.31 ರವರೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿತ್ತು, ಒಟ್ಟಾರೆ 7 ನೇ ಬಾರಿಗೆ ಮತ್ತೆ ಮಾ.31 ರವರೆಗೆ ಗಡುವು ವಿಸ್ತರಣೆ ಮಾಡಿದೆ.

2019ರ ಏ. 1ಕ್ಕೆ ಮೊದಲು ನೋಂದಣಿಯಾದ ವಾಹನಗಳಿಗೆ HSRP ಕಡ್ಡಾಯ ಮಾಡಲಾಗಿದೆ. ಬಹುತೇಕ ವಾಹನಗಳಿಗೆ ಇನ್ನೂ ಹೆಚ್.ಎಸ್.ಆರ್.ಪಿ. ಹಾಕಿಸದ ಹಿನ್ನಲೆಯಲ್ಲಿ ಮತ್ತೆ ಗಡುವು ವಿಸ್ತರಣೆ ಮಾಡಲಾಗಿದೆ.
ಎಚ್ಎಸ್ಆರ್ಪಿ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದು ಅರ್ಥವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ವಾಹನಗಳಿಗೆ ಇದನ್ನು ಕಡ್ಡಾಯಗೊಳಿಸಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ವಾಹನ ಮಾಲೀಕರು ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular