ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ, ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದರು.
ಶನಿವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲ, ಗೃಹ ಇಲಾಖೆ ಜೊತೆ ಚರ್ಚಿಸಿ ರಜೆ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಬಂದ್ ಗೆ ಸಾರಿಗೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಅವರು ಹೇಳಿದರು.
ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಮಾರ್ಚ್ 22ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಘೋಷಿಸಿದ್ದರೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿಸಿದ್ದಾರೆ. ಬಂದ್ ಮಾಡಲ್ಲ ಎಂದಿದ್ದಾರೆ.