ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕಾ ಕೇಂದ್ರ ಶಿವಮೊಗ್ಗ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದೆ. ಆಲ್ಕೊಳ ವೃತ್ತ ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗದಲ್ಲಿ ಪ್ರತಿ ಭಾನುವಾರ ಹಾಗೂ ಎಲ್ಲಾ ಹಬ್ಬಗಳು ಸೇರಿದಂತೆ ಹಾಗೂ ಸರ್ಕಾರಿ ರಜೆ ದಿನಗಳಂದು ಕಛೇರಿ ತೆರೆದಿದ್ದು ಪ್ರವೇಶಾತಿಯನ್ನು ಪಡೆದುಕೊಳ್ಳಲಾಗುವುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.