ಬಾಗಲಕೋಟೆ: ಹಣಕಾಸಿನ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಬಲಾದಿ ಮಠದ ಸದಾಶಿವ ಸ್ವಾಮೀಜಿ, ಕಾಲಜ್ಞಾನದ ಮೂಲಕವು ಪ್ರಸಿದ್ಧಿ ಪಡೆದುಕೊಂಡಿದ್ದರು. ಸ್ವಾಮೀಜಿ ವಿರುದ್ಧ ಹಣಕಾಸಿನ ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ.
76 ಕೋಟಿ ಹಣ ಪಡೆದು ವಂಚನೆ ಆರೋಪದಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಸುದೀರ್ಘ ವಿಚಾರಣೆ ಬಳಿಕ ಸ್ವಾಮೀಜಿ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.