
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಒಂದೆಡೆ ಬಿರುಗಾಳಿ, ಮತ್ತೊಂದೆಡೆ ಆಲಿಕಲ್ಲು ಮಳೆಯಾಗಿದೆ.
ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳೂರು ನಗರಕ್ಕೆ ಮಳೆಯಿಂದ ತಂಪೆರದಂತಾಗಿದ್ದು, ವೀಕೆಂಡ್ ಸಂದರ್ಭದಲ್ಲಿ ಸಂಜೆ ಹೊತ್ತಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಳೆಯ ಸಿಂಚನ ಹಲವರಿಗೆ ಖುಷಿ ತಂದಿದೆ.
ಬೆಂಗಳೂರಿನ ಸಂಜಯ್ ನಗರ, ಭೂಪಸಂದ್ರ, ಹೆಬ್ಬಾಳ, ಮೇಖ್ರಿ ಸರ್ಕಲ್ ಸೇರಿದಂತೆ ವಿವಿಧೆಡೆ ಆಲಿಕಲ್ಲು ಮಳೆಯಾಗುತ್ತಿದೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಮಳೆಯಿಂದ ನಿಟ್ಟುಸಿರುಬಿಟ್ಟಿದ್ದಾರೆ.