
ಗದಗ: ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸೂರು ಗ್ರಾಮದ ಬಸಪ್ಪ ಆದಿವರ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, 14 ವರ್ಷದ ಬಾಲಕಸೇರಿ ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವಣ್ಣಪ್ಪ ಹೊರಪೇಟೆ, ಮಂಜುಳಾ, ನಿರ್ಮಲಾ ಶರಣಪ್ಪ ಸೇರಿ 6 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸಿಲಿಂಡರ್ ಸ್ಪೋಟದ ನಂತರ ಫೋನ್ ಮಾಡಿದರೂ, ಆಂಬುಲೆನ್ಸ್ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.