
ಬೆಳಗಾವಿ: ಪ್ರತಿ ಮನೆಗೆ ತೆರಳಿಯ ಆರೋಗ್ಯ ತಪಾಸಣೆ ನಡೆಸುವ ಗೃಹ ಆರೋಗ್ಯ ಯೋಜನೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರಂಭದಲ್ಲಿಯೇ ಕಾಯಿಲೆಗಳನ್ನು ಪತ್ತೆ ಮಾಡಿದಲ್ಲಿ ಅಗತ್ಯ ಚಿಕಿತ್ಸೆ ಪಡೆದು ಗುಣಪಡಿಸಬಹುದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರವೇ ಆರೋಗ್ಯ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಯೋಜನೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.